No Ads

‘ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ’ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ

ಕರ್ನಾಟಕ 2025-05-14 11:58:38 237
post

ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ (colonel sophia qureshi) ಕುರಿತು ಸುಳ್ಳು ಸುದ್ದಿಯೊಂದು ವೈರಲ್ . ಭಾರತ ಮತ್ತು ಪಾಕಿಸ್ತಾನ ಮಧ್ಯೆ ಸದ್ಯ ಕದನವಿರಾಮ ಘೋಷಿಸಲಾಗಿದೆ. ಹೀಗಿರುವಾಗ ಕಿಡಿಗೇಡಿಗಳು ಈ ಸಂದರ್ಭದಲ್ಲಿ ಕೆಲ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಸೋಫಿಯಾ ಪತಿ ಮನೆ ಮೇಲೆ ಆರ್​​ಎಸ್​ಎಸ್​ (RSS) ಅಟ್ಯಾಕ್ ಮಾಡಿದೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಆದರೆ ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಎಸ್ಪಿ ಭೀಮಾಶಂಕರ್ ಗುಳೇದ್ ಸ್ಪಷ್ಟನೆ ನೀಡಿದ್ದಾರೆ.​

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ತಾಜುದ್ದೀನ್ ಮನೆ ಇದೆ. ‘ಅನಿಸ್ ಉದ್ದೀನ್ ಎಂಬಾತನಿಂದ ಟ್ವೀಟರ್​ನಲ್ಲಿ ಸೋಫಿಯಾ ಪತಿ ಮನೆ ಮೇಲೆ ಆರ್​ಎಸ್​​ಎಸ್​ ಅಟ್ಯಾಕ್ ಮಾಡಿದೆ ಎಂದು ಮನೆ ಧ್ವಂಸದ ಯಾವುದೋ ಹಳೇ ಫೋಟೋವನ್ನು’ ಪೋಸ್ಟ್​ ಮಾಡಿದ್ದಾನೆ.

ಇನ್ನು ಪೋಸ್ಟ್ ವಿಚಾರ ತಿಳಿದು ಸೋಫಿಯಾ ಪತಿ ಕರ್ನಲ್ ತಾಜುದ್ದೀನ್ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ತಾಜುದ್ದೀನ್​ ಮನೆ ಮೇಲೆ ಯಾವುದೇ ಅಟ್ಯಾಕ್ ಆಗಿಲ್ಲ. ಸುರಕ್ಷತಾ ಕ್ರಮವಾಗಿ ಸೋಫಿಯಾ ಮನೆಗೆ ಗೋಕಾಕ್ ಪೊಲೀಸರಿಂದ ಭದ್ರತೆ ನೀಡಲಾಗಿದೆ. ಜೊತೆಗೆ ಸುಳ್ಳು ಸುದ್ದಿ ಪೋಸ್ಟ್ ಕೂಡ ಡಿಲೀಟ್​ ಮಾಡಲಾಗಿದೆ. ಸುಳ್ಳು ಸುದ್ದಿ‌ ನಂಬದಂತೆ ಎಸ್​​ಪಿ ಭೀಮಾಶಂಕರ್ ಗುಳೇದ್ ಮನವಿ ಮಾಡಿದ್ದಾರೆ.

 

No Ads
No Reviews
No Ads

Popular News

No Post Categories
Sidebar Banner
Sidebar Banner