ಮುಡಾ ಭೂ ಮಂಜೂರಾತಿ ಪ್ರಕರಣದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ.
ಇಂದು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ. ಈ ಮೂಲಕ ಮುಡಾ ಹಗರಣದಲ್ಲಿ ಮತ್ತೊಂದು ತಿರುವು ಸಿಕ್ಕಂತಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಹೈಕೋರ್ಟ್ ಗೆ ಇಂದು ತನಿಖೆಯ ವರದಿ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಲ್ಲಾ ತನಿಖೆ ಮುಗಿಸಿದ್ದು, ಇದೀಗ ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡ ಮೂರು ತಿಂಗಳಿಂದ ಮುಡಾ ಪ್ರಕರಣ ಸಂಬಂಧ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಕಚೇರಿಯಲ್ಲಿನ ಸಂಬಂಧಿತ ದಾಖಲೆ, ಸಾಮಾನ್ಯ ಸಭೆ ನಡಾವಳಿ ಪರಿಶೀಲಿಸಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖಾ ವರದಿ ಸಿದ್ದಪಡಿಸಿ ಹೈಕೋರ್ಟ್ ಗೆ ಸಲ್ಲಿಸಿದೆ.
Log in to write reviews