ಮುನಿರತ್ನ HIV ಟ್ರ್ಯಾಪ್ ನಿಜವೆಂದ ಎಸ್ಐಟಿ; ಚಾರ್ಜ್ ಶೀಟ್ನಲ್ಲಿ ಸ್ಫೋಟಕ ಸಂಗತಿಗಳು ಬಯಲು! ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2481 ಪುಟಗಳ ಚಾರ್ಜ್ಶೀಟ್ ಅನ್ನು ಎಸ್ಐಟಿ ತಂಡ ಸಲ್ಲಿಕೆ ಮಾಡಿದೆ. ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜವೆಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ. ಶಾಸಕ ಮುನಿರತ್ನ ಮಾತ್ರವಲ್ಲದೆ ಸುಧಾಕರ್, ಶ್ರೀನಿವಾಸ್, ಇನ್ಸ್‌ಪೆಕ್ಟರ್ ಐಯ್ಯಣ್ಣರೆಡ್ಡಿ ವಿರುದ್ಧವೂ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಮೊಟ್ಟೆ ದಾಳಿ ಬಳಿಕೆ ಬಿಜೆಪಿ (BJP) ಶಾಸಕ ಮುನಿರತ್ನಗೆ (Muniratna) ಮತ್ತೊಂದು ತಲೆ ನೋವು ಶುರುವಾಗಿದೆ. ಅತ್ಯಾಚಾರ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ಸಂಬಂಧ 42ನೇ ಎಸಿಜೆಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡ (SIT) ಚಾರ್ಜ್ ಶೀಟ್ (Charge Sheet) ಸಲ್ಲಿಕೆ ಮಾಡಿದ್ದು, ಅತ್ಯಾಚಾರ ಆರೋಪ ನಿಜವೆಂದು ತಿಳಿಸಿದೆ. ಹೀಗಾಗಿ ರಾಜರಾಜೇಶ್ವರಿ (Rajarajeshwari) ಕ್ಷೇತ್ರದ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಕಗ್ಗಲೀಪರ ಪೊಲೀಸ್ ಠಾಣೆಯಲ್ಲಿ ಸುಮಾರು 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕರ ಮೇಲೆ ಎಫ್ಐಆರ್ ದಾಖಲಾಗಿತ್ತು.
national
No Ads
Log in to write reviews