ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನೊಬ್ಬನ ಕುಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಸದ್ಯ ಸಂತ್ರಸ್ತೆ ಬಾಲಕಿಯನ್ನು ಮಾನ್ವಿ ತಾಲೂಕು ಆಸ್ಪತ್ರೆಯಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಪ್ರಕರಣ ಸಂಬಂಧ ಅತ್ಯಾಚಾರ ಆರೋಪಿ ಶಿವನಗೌಡ ಹಾಗೂ ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಶಾಲೆಯಿಂದ ಮನೆಗೆ ಕರೆದೊಯ್ಯುವ ನೆಪಮಾಡಿ ಆರೋಪಿ ಶಿವನಗೌಡ ಬಾಲಕಿಯನ್ನು ಶಾಲೆಯಿಂದ ಕರೆದುಕೊಂಡು ಹೋಗಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಪೋಷಕರ ಅನುಮತಿಯಿಲ್ಲದೆ ಅಪರಿಚಿತರೊಂದಿಗೆ ಮಗುವನ್ನು ಕಳುಹಿಸಿದ ಶಾಲಾ ಸಿಬ್ಬಂದಿ ವಿರುದ್ಧ ಸಂತ್ರಸ್ತೆ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅತ್ಯಾಚಾರ ಎಸಗಿದಾತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಬೇರೆ ಯಾವ ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು ಎಂದು ಪೋಷಕರು ಆಗ್ರಹಿಸಿದ್ದಾರೆ.
Log in to write reviews