ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಗುರುವಾರ ನಡೆದ ಘಟನೆಯೊಂದು ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದೆ. ಹೌದು ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಕಾಮುಕರು ಹಲ್ಲೆ ನಡೆಸಿ ಅತ್ಯಾಚಾರವೆಸಗಿರುವ ಘಟನೆ ಗುರುವಾರ ರಾತ್ರಿ ನಡೆದಿತ್ತು. ಈ ವೇಳೆ ಗಲಾಟೆ ವೇಳೆ ನಾಪತ್ತೆಯಾಗಿದ್ದ ಒಡಿಶಾದ ಬಿಬಾಶ್ (26) ಎಂಬ ಪ್ರವಾಸಿಗನ ಮೃತದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.
ದುಷ್ಕರ್ಮಿಗಳು ವಿದೇಶಿ ಮಹಿಳೆ ಮತ್ತು ಹೋಟೆಲ್ ಮಾಲೀಕರ ಮೇಲೆ ಅತ್ಯಾಚಾರ ನಡೆಸಿ, ಅವರ ಬಳಿಯಿದ್ದ 9500 ರೂಪಾಯಿ ಹಣವನ್ನು ದೋಚಿದ್ದಾರೆ. ಅಲ್ಲದೆ, ದುಷ್ಕರ್ಮಿಗಳು ಅಮೆರಿಕಾದ ಡ್ಯಾನಿಯಲ್ ಮತ್ತು ಬಿಬಾಸ್ ಹಾಗೂ ಮಹಾರಾಷ್ಟ್ರದ ಪಂಕಜ್‌ರನ್ನು ಕಾಲುವೆಗೆ ತಳ್ಳಿದ್ದಾರೆ. ಪಂಕಜ್ ಮತ್ತು ಡ್ಯಾನಿಯಲ್ ಕಾಲುವೆಯಿಂದ ಹೊರಬಂದರೆ, ಒರಿಸ್ಸಾ ಮೂಲದ ಬಿಬಾಸ್ ನಾಪತ್ತೆಯಾಗಿದ್ದರು.
ವಿಷಯ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಮೀನುಗಾರರು ಬಿಬಾಸ್‌ಗಾಗಿ ಶೋಧ ಕಾರ್ಯ ಆರಂಭಿಸಿದರು. ಆದರೆ, ಇದೀಗ ಬಿಬಾಸ್ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹೋಟೆಲ್ ಮಾಲೀಕೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Log in to write reviews