No Ads

ಚಾಲೆಂಜಿoಗ್ ಸ್ಟಾರ್ ದರ್ಶನ್‌ಗೆ ಕಾದಿದ್ಯ ಸಂಕಷ್ಟ..! 

ಕರ್ನಾಟಕ 2024-12-04 21:58:56 3
post

ಬೆಂಗಳೂರು, ಡಿ.04 : ಮಧ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರೋ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗೋ ಸಾಧ್ಯತೆಯಿದೆ. ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ಗೆ ರಾಜ್ಯ ಪೊಲೀಸ್ ಅಧಿಕಾರಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರಾಜ್ಯ ಸುಪ್ರೀಂ ಗೆ ಎಸ್‌ಎಲ್‌ಪಿ ಸಲ್ಲಿಕೆ ಮಾಡಲಾಗಿದೆ. ಇದೇ ಶುಕ್ರವಾರ ಅಥವಾ ಮುಂದಿನ ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಹೈ ಕೋರ್ಟ್ನ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಜಾಮೀನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಕಾಮಾಕ್ಷಿಪಾಳ್ಯ ಪೊಲೀಸ್ರು ಸರ್ಕಾರಕ್ಕೆ ಮನವಿ ಮಾಡಿದ್ರು. ರಾಜ್ಯ ಕಾಂಗ್ರೆಸ್ ಸರ್ಕಾರದ ಅನುಮತಿ ನೀಡಿದ ಬೆನ್ನಲ್ಲೇ ಇಂದು ಸುಪ್ರೀಂ ಕೋರ್ಟ್ಗೆ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner