ಧಾರವಾಡ-ಹುಬ್ಬಳ್ಳಿ-ಶಿವಮೊಗ್ಗ; ಲೋಕಸಮರ ತಾರಕಕ್ಕೇರಿರುವ ಈ ಸಮಯದಲ್ಲಿ ಮೊನ್ನೆ ಸಚಿವ ಸಂತೋಷ್ ಲಾಡ್ ವಿರುದ್ಧ ಅವಹೇಳನಕಾರಿ ಪದ ಪ್ರಯೋಗಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ರಾಜ್ಯದ ಹಲವು ಕಡೆ ಮರಾಠ ಸಮುದಾಯಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿ-ಧಾರವಾಡ ಅಷ್ಟೇ ಅಲ್ಲದೇ ವಿಜಯೇಂದ್ರರ ತವರು ಜಿಲ್ಲೆ ಶಿವಮೊಗ್ಗದಲ್ಲೂ ಪ್ರತಿಭಟಿಸಿದ ಪ್ರತಿಭಟನಾಕಾರರು ವಿಜಯೇಂದ್ರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಲ್ಲದೇ ಈ ಕೂಡಲೇ ಲಾಡ್ ಅವರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತ ಸಚಿವ ಸಂತೋಷ್ ಲಾಡ್ ಅವರ ಬಗ್ಗೆ ನಾಲಾಯಕ್ ಪದವನ್ನು ಬಳಸಿದ್ದು ರಾಜ್ಯದ ಮರಾಠ ಸಮುದಾಯಗಳ ಕಣ್ಣು ಕೆಂಪಗಾಗಿಸಿವೆ. ರಾಜ್ಯದ ಮರಾಠ ಸಮುದಾಯವನ್ನು ಪ್ರತಿನಿಧಿಸುವ ಏಕಮಾತ್ರ ಮರಾಠ ಸಮುದಾಯದ ನಾಯಕರೊಬ್ಬರ ವಿರುದ್ಧ ಕಾರಣವೇ ಇಲ್ಲದೇ ನಿಂದಿಸುವ ಹೇಳಿಕೆ ನೀಡಿದ್ದರ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಯಿಸಿರುವ ಮರಾಠ ಸಮುದಾಯ ಲೋಕಸಭೆ ಚುನಾವಣೆಯಲ್ಲಿ ವಿಜಯೇಂದ್ರ ಹಾಗೂ ಬಿಜೆಪಿಗೆ ತಕ್ಕ ಪಾಠ ಕಲಿಸಲು ಸನ್ನದ್ಧರಾಗಿದ್ದಾರೆ. ಇನ್ನು ವಿಜಯೇಂದ್ರರ ಈ ಹೇಳಿಕೆ ಮರಾಠ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಧಾರವಾಡ, ಉತ್ತರಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಜಯೇಂದ್ರ ಹೇಳಿಕೆ ವ್ಯಾಪಕ ಖಂಡನೆಗೆ ಒಳಗಾಗಿದ್ದು, ಪಕ್ಷಕ್ಕೆ ಮುಜುಗರ ತರುವ ಇಂತಹ ಹೇಳಿಕೆ ಬೇಕಾಗಿತ್ತಾ ಎನ್ನುವ ಚರ್ಚೆಗಳು ಜೋರಾಗಿ ನಡೆಯುತ್ತಿವೆ.
ರಾಜ್ಯದ 9 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ವಿಜಯೇಂದ್ರರ ಹೇಳಿಕೆ?
No Ads
Log in to write reviews