ಭಾರತದ ಅತ್ಯಂತ ಪುರಾತನ ಶಕ್ತಿಪೀಠಗಳಲ್ಲಿ ಒಂದಾದ ಕಾಮಾಕ್ಯ ದೇವಿ ದೇವಾಲಯ. ಭಾರತೀಯ ಚಿತ್ರರಂಗದ ಹಲವು ತಾರೆಯರು ಮತ್ತು ರಾಜಕಾರಣಿಗಳ ನೆಚ್ಚಿನ ದೇವಾಲಯ. ದೇಶದ 51 ಶಕ್ತಿಪೀಠಗಳಲ್ಲಿ ಗುವಾಹಟಿ ಕಾಮಾಕ್ಯಾ ದೇವಾಲವೇ ಈ ಕಾರ್ಣಿಕದ ಕ್ಷೇತ್ರ. ಪವರ್ ಫುಲ್' ಶಕ್ತಿ ದೇವತೆ ಎನ್ನಿಸಿಕೊಂಡಿರುವ ಕಾಮಾಕ್ಷಿ ಮಾತೆಯನ್ನು ಪೂಜಿಸುವ ಭಕ್ತಾಧಿಗಳ ಸಂಖ್ಯೆ ಅಗಣಿತ. ಗುವಾಹಟಿ ನಗರದ ಪಶ್ಚಿಮ ಭಾಗದ ನಿಲಚಲ್ ಬೆಟ್ಟದ ಮೇಲೆ ಕಾಮಾಕ್ಷಿ ದೇವಿ ನೆಲಸಿದ್ದಾಳೆ. ಇಲ್ಲಿ ದೇವಿಯ ವಿಗ್ರಹವಿಲ್ಲ ಬದಲಾಗಿ ಯೋನಿಯನ್ನು ಪೂಜಿಸಲಾಗುತ್ತದೆ. ಪ್ರತಿ ವರ್ಷ ಜೂನ್ ತಿಂಗಳು ಬಂದರೆ ಈ ತಾಯಿ ಮುಟ್ಟಾಗುತ್ತಾಳೆ. ಅದೇ ಕಾರಣಕ್ಕೆ ಹತ್ತಿರದಲ್ಲಿ ಹರಿವ ಬ್ರಹ್ಮಪುತ್ರ ನೀರು ಕೆಂಪಾಗುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಮುಟ್ಟಾದ ಮೂರು ದಿನಗಳ ಕಾಲ ಈ ದೇವಾಲಯವನ್ನು ಬಂದ್ ಮಾಡಲಾಗುತ್ತದೆ. ಇಲ್ಲಿ ಭಕ್ತರಿಗೆ ಕೆಂಪು ಬಣ್ಣದ ಬಟ್ಟೆಯನ್ನು ಪ್ರಸಾದವಾಗಿ ನೀಡಲಾಗುತ್ತದೆ., ದೇವಿ ಮುಟ್ಟಾದಾಗ ದೇವಾಲಯದಲ್ಲಿ ಬಿಳಿ ಬಟ್ಟೆಗಳನ್ನು ಹರಡಿ ದೇವಾಲಯವನ್ನು ಮೂರು ದಿನಗಳವರೆಗೆ ಮುಚ್ಚಲಾಗುತ್ತದೆ. ಮೂರು ದಿನಗಳ ನಂತರ ದೇವಾಲಯದ ಬಾಗಿಲು ತೆರೆದಾಗ, ಬಿಳಿ ಬಟ್ಟೆಯು ದೇವಿಯ ರಕ್ತದಿಂದ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಈ ಬಟ್ಟೆಯನ್ನು ಅಂಬುವಾಚಿ ಬಟ್ಟೆ ಎಂದು ಕರೆಯಲಾಗುತ್ತದೆ ಮತ್ತು ಇದನ್ನೇ ಭಕ್ತರಿಗೆ ಪ್ರಸಾದವಾಗಿ ಕೊಡಲಾಗುತ್ತದೆ. ಗುವಾಹಟಿ ನಗರದ ಪಶ್ಚಿಮದಲ್ಲಿರುವ ಬಹಳ ಶಕ್ತಿಯುತವಾದ ಕ್ಷೇತ್ರದ ಗರ್ಭಗುಡಿಯಲ್ಲಿರುವುದು ಶಕ್ತಿ ದೇವತೆಯ ಯೋನಿ ಹೊರತು ಮೂರ್ತಿಯಲ್ಲ. ಸತಿಯ ದೇಹ 51 ಭಾಗಗಳಾಗಿ ದೇಶದ ಉದ್ದಗಲದಲ್ಲೂ ಬಿದ್ದು ವಿವಿಧ ಶಕ್ತಿಪೀಠಗಳಾಗಿ ಹೊಮ್ಮಿದಾಗ, ಇಲ್ಲಿ ಆಕೆಯ ಗರ್ಭ ಬಿದ್ದಿತು ನಂಬಿಕೆ ಇದೆ. ಮಕ್ಕಳಾಗದವರಿಗೆ ಸಂತಾನಭಾಗ್ಯ ಸೇರಿದಂತೆ ಬೇಡಿದ ವರಗಳನ್ನೆಲ್ಲ ಕರುಣಿಸುವ ಶಕ್ತಿ ದೇವತೆಯಾಗಿ ಗುರುತಿಸಿಕೊಂಡಿರುವ ಕಾಮಾಕ್ಯ ದೇವಿಯ ವಿಶೇಷವೆಂದರೆ ಕಲ್ಲಿನಿಂದ ತಯಾರಿಸುವ ಇಲ್ಲಿನ ಕುಂಕುಮ. ಕಾಮಾಕ್ಯ ಸಿಂಧೂರ್ ಎಂದೇ ಪ್ರಸಿದ್ಧವಾಗಿರುವ ಕುಂಕುಮವನ್ನು ಮಹಿಳೆಯರು ಪೂಜ್ಯನೀಯ ಭಾವದಿಂದ ಹಣೆಗಿಟ್ಟುಕೊಳ್ಳುತ್ತಾರೆ. ಈ ದೇವಾಲಯ ತಂತ್ರಮಂತ್ರಗಳಿಗೂ ಜನಪ್ರಿಯವಾಗಿದೆ. ಇಲ್ಲಿ ನೂರಾರು ಸಾಧುಗಳು, ಅಗೋರಿಗಳು ಮಾಟಮಂತ್ರ ಹೋಗಲಾಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಭೂತದೆವ್ವ ಬಿಡಿಸುವುದು, ನೆಗೆಟಿವ್ ಎನರ್ಜಿ ತೊಡೆದು ಹಾಕುವುದು ಮುಂತಾದ ಹಲವು ಕೆಟ್ಟ ಶಕ್ತಿಗಳನ್ನು ತೆಗೆದುಹಾಕುವುದನ್ನು ಇಲ್ಲಿ ಅಘೋರಿಗಳು ಮಾಡುತ್ತಾರೆ. ಹಾಗಾಗಿ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಅಪಾರ. ಇಲ್ಲಿ ಪ್ರಾಣಿ ಬಲಿ ಸಾಮಾನ್ಯವಾಗಿದೆ. ಆದರೆ ಇಲ್ಲಿ ಹೆಣ್ಣು ಪ್ರಾಣಿಯನ್ನು ಬಲಿ ಕೊಡುವುದು ನಿಷೇಧ. ಹೆಣ್ಣಿಗೆ ಅಷ್ಟು ಪ್ರಾಮುಖ್ಯತೆಯನ್ನು ಈ ದೇವಾಲಯದಲ್ಲಿ ಕೊಡಲಾಗುತ್ತದೆ. ಒಟ್ಟಿನಲ್ಲಿ ಹೆಣ್ಣಿನ ನೈಸರ್ಗಿಕ ಪ್ರಕ್ರಿಯೆ "ಮುಟ್ಟ"ನ್ನೂ ಮಾನ್ಯವಾಗಿಸುವ, ಸಾಮಾನ್ಯವಾಗಿ ನಾವು ‘ಅಪವಿತ್ರ’ ಎಂದು ಭಾವಿಸುವ ಋುತುಸ್ರಾವವನ್ನೂ ‘ಪವಿತ್ರ’ ವಾಗಿಸುವ ದೇವಿಯ ಶಕ್ತಿ ಬೆರಗು ಮೂಡಿಸುತ್ತವೆ.
ಪವರ್ ಫುಲ್' ಶಕ್ತಿ ದೇವತೆ, ಮೂರ್ತಿಯೇ ಇಲ್ಲದ ಕಾಮಾಕ್ಯ ದೇವಿ..! ಈ ದೇವಾಲಯದಲ್ಲಿ ಅಂತದ್ದೇನಿದೆ? ವಿಶೇಷತೆಯಾದೃ ಏನು..?

No Ads
Log in to write reviews