No Ads

ಅಶ್ಲೀಲಕ್ಕೂ ಒಂದು ಮಿತಿ ಇರಬೇಕು, ಇದು ಎಲ್ಲಾ ಮೀರಿದೆ ಎಂದ ಕೋರ್ಟ್, ಪ್ರಜ್ವಲ್ ರೇವಣ್ಣ ಗೆ ಹೈಕೋರ್ಟ್ ಚಾಟಿ

ಜಿಲ್ಲೆ 2025-01-17 17:24:42 209
post

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಅಲ್ಲದೇ ಅಶ್ಲೀಲಕ್ಕೂ ಒಂದು ಮಿತಿ ಇರಬೇಕು, ಇದು ಎಲ್ಲಾ ಮೀರಿದೆ ಎಂದು ಕೋರ್ಟ್​ ಚಾಟಿ ಬೀಸಿದೆ.

ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕುರಿತಂತೆ ಅವರ ಮೊಬೈಲ್​ನಲ್ಲಿರುವ ವಿಡಿಯೋ/ಚಿತ್ರಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಪ್ರಜ್ವಲ್ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ಪೀಠ ಮೌಖಿಕವಾಗಿ ತಿಳಿಸಿದೆ.

ಅಲ್ಲದೆ, ಸುಪ್ರೀಂ ಕೋರ್ಟ್ ಗೋಪಾಲಕೃಷ್ಣ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಹಾಲಿ ಪ್ರಕರಣಕ್ಕೆ ಅಗತ್ಯವಾದ ವಿಡಿಯೋ/ಚಿತ್ರಗಳನ್ನು ಪ್ರಾಸಿಕ್ಯೂಷನ್ ಒದಗಿಸಲಿದೆ. ಇದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ವಿಡಿಯೋ/ಚಿತ್ರಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು ಎಂದು ಪೀಠ ಹೇಳಿದೆ.

ಅರ್ಜಿದಾರರು ಕೋರುತ್ತಿರುವ ದಾಖಲೆಗಳನ್ನು ಪ್ರಾಸಿಕ್ಯೂಷನ್ ಆಧರಿಸುತ್ತಿಲ್ಲ. ಸಂತ್ರಸ್ತೆಯ ಚಿತ್ರಗಳು ಮತ್ತು ಹೇಳಿಕೆ ಹೊರತುಪಡಿಸಿ ಬೇರೆ ಯಾವುದನ್ನೂ ಪ್ರಾಸಿಕ್ಯೂಷನ್ ಆಧರಿಸುವುದಿಲ್ಲ ಎಂದು ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರು ನಾನು ಯಾವುದೇ ಅಶ್ಲೀಲ ಚಿತ್ರಗಳನ್ನು ಒದಗಿಸಿ ಎಂದು ಕೋರಿಲ್ಲ. ಪ್ರಾಸಿಕ್ಯೂಷನ್​ ಎಫ್‌ಎಸ್‌ಎಲ್ ವರದಿಯಲ್ಲಿ ಎಷ್ಟು ಅಶ್ಲೀಲ ಚಿತ್ರಗಳಿವೆ ಎಂದು ಉಲ್ಲೇಖಿಸಿಲ್ಲ. 2024ರ ಏಪ್ರಿಲ್ 30ರ ಮಹಜರು ಸಂದರ್ಭದಲ್ಲಿ ಮಾಜಿ ಕಾರು ಚಾಲಕನ ಫೋನ್ ಮತ್ತು ಸಿಮ್ ಜಪ್ತಿ ಮಾಡಲಾಗಿದೆ. ಅದನ್ನು ಒದಗಿಸಬೇಕು ಎಂದು ಕೋರಿದರು.

ಈ ವೇಳೆ ಸರ್ಕಾರಿ ವಕೀಲರು, ನ್ಯಾಯಾಲಯ ನಿರ್ದೇಶಿಸಿದರೆ ಕ್ಲೋನ್ ಮಾಡಿರುವ ಎಲ್ಲಾ ದಾಖಲೆಗಳನ್ನು

ಒದಗಿಸಲಾಗುವುದು. ಆದರೆ, ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವಿಳಂಬಿಸಲು ಇಂಥ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ ಎಂದು ಪೀಠಕ್ಕೆ ವಿವರಿಸಿದರು.

ವಾದ-ಪ್ರತಿವಾದ ಆಲಿಸಿದ ಪೀಠವು ಹಾಲಿ ಸಲ್ಲಿಕೆ ಮಾಡಿರುವ ಅರ್ಜಿಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅರ್ಜಿ ಇತ್ಯರ್ಥಪಡಿಸಿತು.

 

No Ads
No Reviews
No Ads

Popular News

No Post Categories
Sidebar Banner
Sidebar Banner