No Ads

ಕೊಂಡ ಹಾಯ್ದು ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ!

ಜಿಲ್ಲೆ 2024-04-10 15:57:45 116
post

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಕೈವಾರದ ಯೋಗಿ ನಾರಾಯಣ ದೇವಾಲಯ, ಘಾಟಿ ಸುಬ್ರಮಣ್ಯ ಸೇರಿದಂತೆ ಹಲವು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಲಹಂಕದ ಚೌಡೇಶ್ವರಿ ದೇವಾಲಯದಲ್ಲಿ ಕೊಂಡ ಹಾಯ್ದ ರಕ್ಷಾ ರಾಮಯ್ಯ, ನಾಡಿನಲ್ಲಿ ಮಳೆ, ಬೆಳೆಯಾಗಿ ಸಮೃದ್ಧಿ ನೆಲಸಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಗೆ ತಾಯಿ ಚೌಡೇಶ್ವರಿ ಸಕಲ ಸಮೃದ್ಧಿ ಕಲ್ಪಿಸಲಿ ಎಂದು ಪ್ರಾರ್ಥಿಸಿದರು. ಮಧುರೆ ಶನೇಶ್ವರ ಸ್ವಾಮಿ ಸೇರಿ ವಿವಿಧ ದೇವಾಲಯಗಳಿಗೆ ತೆರಳಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಹಿತ ರಕ್ಷಣೆಗಾಗಿ ಪೂಜೆ ಸಲ್ಲಿಸಿದರು. ಎಂ.ಎಸ್.‌ ರಾಮಯ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಎಂ.ಆರ್.‌ ಜಯರಾಂ, ವಿಧಾನಪರಿಷತ್ ಸದಸ್ಯರಾದ ಎಂ.ಆರ್ ಸೀತಾರಾಂ ಅವರ ಜೊತೆಗೂಡಿ ಕೈವಾರದಲ್ಲಿ ಕಾಲಜ್ಞಾನಿ ಕೈವಾರ ತಾತಯ್ಯನವರ ಆಶೀರ್ವಾದ ಪಡೆದರು. ಯುಗಾದಿ ಹಬ್ಬದ ಪ್ರಯುಕ್ತ ಕೈವಾರಕ್ಕೆ ಭೇಟಿ ನೀಡಿ ನಾಡಿನ ಜನರ ಯೋಗ ಕ್ಷೇಮ ಕಾಪಾಡುವಂತೆ ಕೈವಾರ ತಾತಯ್ಯನವರಲ್ಲಿ ಪ್ರಾರ್ಥಿಸಿದರು. ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

No Ads
No Reviews
No Ads

Popular News

No Post Categories
Sidebar Banner
Sidebar Banner