ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಕಾವು ಏರುತ್ತಿದೆ. ಅದರೊಂದಿಗೆ ಚುನಾವಣಾ ಪ್ರಚಾರದ ಅಬ್ಬರವೂ ರಂಗೇರುತ್ತಿದೆ. ಕೈ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಅವರಿಗೆ ಪಕ್ಷದ ಹಲವಾರು ಹಿರಿಯ ನಾಯಕರು ಸಾಥ್ ನೀಡುತ್ತಿದ್ದಾರೆ. ಇಂದು ಬಾಗಲಕೋಟೆ ನಗರದ ವಿದ್ಯಾಗಿರಿಯ ಬಿಟಿಡಿಎ ಆಫೀಸ್ ನಿಂದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಬಾಗಲಕೋಟೆಯಲ್ಲಿ ಕಳೆದ 20 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದು, ಆಡಳಿತ ವಿರೋದಿ ಅಲೆ ಹಿಂದೆಂದಿಗಿಂತಲೂ ಅಧಿಕವಾಗಿದೆ. ಈ ಬಾರಿ ಬಾಗಲಕೋಟೆ ಜನ ಹೊಸ ಮುಖಕ್ಕೆ ಬೆಂಬಲ ನೀಡುವ ದಿಟ್ಟ ಹೆಜ್ಹೆಯನ್ನಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಚ್ ವೈ ಮೇಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ರಕ್ಷಿತಾ ಈಟಿ, ಪಕ್ಷದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಸಾಥ್ ನೀಡಿದರು.
ಎಲ್ಲೆಲ್ಲೂ ಸಂಯುಕ್ತ ಪಾಟೀಲ್ ಅಬ್ಬರ; ಮನೆ ಮನೆಗೆ ತೆರಳಿ ಮತಯಾಚನೆ
No Ads
Log in to write reviews