ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರು ಇಂದು ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ರೋಡ್ ಶೋ ನಡೆಸಿದರು. ಸಕ್ರಿ ಶಾಲೆ ಹತ್ತಿರದ ಕಾಂಗ್ರೆಸ್ ಕಚೇರಿಯಿಂದ ರೋಡ್ ಶೋ ನಡೆಸಿದರು. ರೋಡ್ ಶೋ ಉದ್ದಕ್ಕೂ ಸಾವಿರಾರು ಜನರು ಸೇರಿ ತಮ್ಮ ಮೆಚ್ಚಿನ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದರು. ಬಿಸಿಲಿನ ಬೇಗೆಯಲ್ಲೂ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದು ವಿಶೇಷವಾಗಿತ್ತು. ಮೆರವಣಿಗೆಯಲ್ಲಿ ವಾದ್ಯಗೋಷ್ಠಿ, ಡೊಳ್ಳು ಗಮನಸೆಳೆಯಿತು. ಕಾಂಗ್ರೆಸ್ ಧ್ವಜವನ್ನು ಹಿಡಿದ ಕಾರ್ಯಕರ್ತರು ಜೈಕಾರ ಕೂಗುತ್ತಾ ಹೆಜ್ಜೆ ಹಾಕಿದರು. ಸಂಯುಕ್ತ ಪಾಟೀಲ್ ಅವರೊಂದಿಗೆ ತೆರೆದವಾಹನದಲ್ಲಿ ಪಕ್ಷದ ಹಲವಾರು ಮುಖಂಡರು ಭಾಗಿಯಾಗಿದ್ದರು. ಸಚಿವರಾದ ಎಚ್ ಕೆ ಪಾಟೀಲ್, ಆರ್ ಬಿ ತಿಮ್ಮಾಪುರ, ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಉಮಾಶ್ರೀ, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಜಿ ಟಿ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ನಂಜಯ್ಯ ಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಮುಖಂಡರಾದ ಬಿ ಬಿ ಚಿಮ್ಮನಕಟ್ಟಿ, ಸಿದ್ದು ಕೊಣ್ಣೂರ, ಆನಂದ ನ್ಯಾಮಗೌಡ ಮತ್ತಿತರರು ಉಪಸ್ಥಿತರಿದ್ದರು. ಜನರತ್ತ ಕೈ ಬೀಸುತ್ತಿದ್ದ ಸಂಯುಪ್ತ ಪಾಟೀಲ್ ಅವರು ಬೆಂಬಲ ಕೋರಿದರು ಈ ಬಾರಿ ಬಾಗಲಕೋಟೆಯಲ್ಲಿ ಹೊಸ ಇತಿಹಾಸ ಸೃಷ್ಟಿಸೋಣ. ಹೊಸ ಅಧ್ಯಾಯವನ್ನು ಬರೆಯೋಣ ಎಂದ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೂ ಮೊದಲು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಭಿವೃದ್ಧಿ ಪರ ನಮ್ಮ ನಡೆಯಾಗಿರಲಿ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಬೆಂಬಲಿಸಿ. ನಿಮ್ಮೆಲ್ಲರ ಆಶೀರ್ವಾದ ಇರಲಿ. ಬಡವರ ಪಕ್ಷ, ರೈತರ ಪಕ್ಷ ಕಾಂಗ್ರೆಸ್‌ದ ಪರ ದುಡಿದು ದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.
ಬಾಗಲಕೋಟೆಯಲ್ಲಿ ಹೊಸ ಇತಿಹಾಸ ಬರೆಯೋಣ: ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಕೆ
No Ads
Log in to write reviews