No Ads

ಅದ್ಧೂರಿಯಾಗಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ನಟಿ ರಾಧಿಕಾ ಪಂಡಿತ್

ಕರ್ನಾಟಕ 2024-04-01 12:42:36 43
post

ಅದ್ಧೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್​​ ಮಾಡಿದ ನಟಿ ರಾಧಿಕಾ ಪಂಡಿತ್​​   ನಟಿ ರಾಧಿಕಾ ಪಂಡಿತ್ ಮಾರ್ಚ್ 7ರಂದು ಅಭಿಮಾನಿಗಳ ಜೊತೆ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದರು. ಅದಾದ ಬಳಿಕ ಕುಟುಂಬದ ಜೊತೆ ಅದ್ಧೂರಿಯಾಗಿ ಬರ್ತ್‌ಡೇ ಆಚರಿಸಿಕೊಂಡಿದ್ದಾರೆ. ಇದೀಗ ಬರ್ತ್​ ಡೇ ಆಚರಣೆಯ ವಿಡಿಯೋ ಝಲಕ್ ಹಂಚಿಕೊಂಡಿದ್ದಾರೆ. ಸುಂದರ ವಿಡಿಯೋವನ್ನು ಶೇರ್​ ಮಾಡಿಕೊಂಡ ನಟಿ ಮಾರ್ಚ್ 7, ನನ್ನ ಜೀವನದಲ್ಲಿ ಇಂತಹ ವ್ಯಕ್ತಿಗಳನ್ನು ಪಡೆದಿರೋದು ನನಗೆ ಸಿಕ್ಕ ಆಶೀರ್ವಾದ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಸ್ಯಾಂಡಲ್​ವುಡ್ ಸಿಂಡ್ರೆಲಾ ಎಂದೇ ಕರೆಯಲಾಗುವ ನಟಿ ರಾಧಿಕಾ ಪಂಡಿತ್​​ ತಮ್ಮ​​ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್​ ಮಾಡಿಕೊಂಡಿದ್ದಾರೆ. ರಾಕಿಂಗ್​ ಸ್ಟಾರ್​​ ಯಶ್​ ಅವರ ಪತ್ನಿ ರಾಧಿಕಾ ಪಂಡಿತ್​ ಅವರು ಸಿನಿಮಾದಿಂದ ಕೊಂಚ ಬ್ರೇಕ್ ತೆಗೆದುಕೊಂಡು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ​​. ಸುಂದರ ವಿಡಿಯೋವನ್ನು ಶೇರ್​ ಮಾಡಿಕೊಂಡ ನಟಿ ಮಾರ್ಚ್ 7, ನನ್ನ ಜೀವನದಲ್ಲಿ ಇಂತಹ ವ್ಯಕ್ತಿಗಳನ್ನು ಪಡೆದಿರೋದು ನನಗೆ ಸಿಕ್ಕ ಆಶೀರ್ವಾದ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇನ್ನು ವಿಡಿಯೋದಲ್ಲಿ ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬಸ್ಥರ ಜೊತೆ ಕಡಲ ತೀರದಲ್ಲಿ ಕೇಕ್ ಕಟ್​ ಮಾಡಿದ್ದಾರೆ. ಬಳಿಕ ಸ್ಟೇಜ್‌ನಲ್ಲಿ ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿದ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ.      

No Ads
No Reviews
No Ads

Popular News

No Post Categories
Sidebar Banner
Sidebar Banner