ಸಾವಿನಲ್ಲೂ ಸಾರ್ಥಕತೆ ಮೆರೆದ ಡೇನಿಯಲ್ ಬಾಲಾಜಿ; ಕಣ್ಣುಗಳನ್ನ ದಾನ ಮಾಡಿ ಬೆಳಕಾದ ನಟ ಬಹುಭಾಷಾ ನಟನಾಗಿ ದಕ್ಷಿಣ ಭಾರತದಲ್ಲಿ ಪ್ರೀತಿ ಗಳಿಸಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ದುನಿಯಾ ವಿಜಯ್ ನಟಿಸಿದ ‘ಶಿವಾಜಿನಗರ’, ‘ಕಿರಾತಕ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದರು. ಇದೀಗ ನಟ ತಮ್ಮ ಕಣ್ಣುಗಳನ್ನು (eyes donated) ದಾನ ಮಾಡಿದ್ದಾರೆ. ಈ ಬಗ್ಗೆ ಅವರ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದುರಂತ ಎಂದರೆ ಮಾರ್ಚ್ 29ರ ರಾತ್ರಿ ಹಠಾತ್ ಹೃದಯಾಘಾತದಿಂದ ಬಾರದ ಲೋಕಕ್ಕೆ ಹೋಗಿದ್ದಾರೆ. ʻಕಿರಾತಕ’ ಸಿನಿಮಾ ಕನ್ನಡಕ್ಕೂ ಕಾಲಿಟ್ಟಿದ್ದ ಡೇನಿಯಲ್ ಬಾಲಾಜಿ ದುನಿಯಾ ವಿಜಯ್ ನಟಿಸಿದ ‘ಶಿವಾಜಿನಗರ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದರು. ಆದರೀಗ ನಟ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನಟ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ನಟ ಎದೆನೋವಿನಿಂದ ಇತ್ತೀಚೆಗೆ ಚೆನ್ನೈ ಆಸ್ಪತ್ರೆಗೆ ದಾಖಲಾದರು. ನಂತರ ಅವರು ಕೊನೆಯುಸಿರು ಎಳೆದರು. ಇಂದು (ಮಾ.30) ಚೆನ್ನೈನ ಪುರಸೈವಾಕ್ಕಂನಲ್ಲಿರುವ ಅವರ ನಿವಾಸದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗೌತಮ್ ಮೆನನ್, ವೆಟ್ರಿ ಮಾರನ್ ಅವರಂತಹ ಪ್ರಮುಖ ಗಣ್ಯರು ನಟನ ನಿಧನಕ್ಕೆ ಸಂತಾಪ ಸೂ ಚಿಸಿದ್ದಾರೆ. ಕಮಲ್ ಹಾಸನ್ ನಟನೆಯ ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಮೋಹನ್ಲಾಲ್ ನಟನೆಯ ‘ಭಗವಾನ್’, ಮಮ್ಮೂಟಿ ನಟನೆಯ ‘ಡ್ಯಾಡಿ ಕೂಲ್’ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದರು. ಬಾಲಾಜಿ ಕೆಲವು ಮಲಯಾಳಂ, ತೆಲುಗು ಮತ್ತು ಕನ್ನಡ ಚಲನಚಿತ್ರಗಳಲ್ಲಿಯೂ ಕೆಲಸ ಮಾಡಿದ್ದರು
ಸಾವಿನಲ್ಲೂ ಸಾರ್ಥಕತೆ ಮೆರೆದ ಡೇನಿಯಲ್ ಬಾಲಾಜಿ
No Ads
Log in to write reviews