ಬೆಂಗಳೂರು, ಡಿ.05 : ಗಿರಿನಗರ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಶ್ರೀ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಎಂಬಾತ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಗಿರಿ ನಗರ ಪೊಲೀಸರು ಆರೋಪಿಯನ್ನ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಯು ಕಳೆದ 7 ವರ್ಷಗಳ ಹಿಂದೆ ಹಿಂದೂ ಧರ್ಮದಿಂದ ಮತಾಂತರಗೊAಡಿದ್ದಾನೆAದು ತಿಳಿದುಬಂದಿದೆ. ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ ಆರೋಪಿ ರಾಜ್ ಶಿವು ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಕ್ರಿಶ್ಚಿಯನ್ ಧರ್ಮಕ್ಕೆೆ ಮತಾಂತರವಾದ ಮೇಲೆ ಧರ್ಮಾಂದನAತೆ ವರ್ತಿಸುತ್ತಿದ್ದ. ಹೀಗಾಗಿ ಶಿವಕುಮಾರ್ ಸ್ವಾಮೀಜಿ ಮೂರ್ತಿಯನ್ನು ಒಡೆಯಲು ಪ್ಲಾನ್ ಮಾಡಿಕೊಂಡಿದ್ದ. ಕಳೆದ ಶನಿವಾರ ರಾತ್ರಿ ಸುತ್ತಿಗೆ ಸಮೇತ ಬಂದಿದ್ದ ಆರೋಪಿ, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಎಸ್ಕೇಪ್ ಆಗಿದ್ದ. ಕನಸಲ್ಲಿ ಯೇಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ರಾಜ್ ಶಿವು ಹೇಳಿಕೆ ನೀಡಿದ್ದಾನೆ.
ಶ್ರೀ ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ ಒಡೆಯಲು ಯೇಸು ಪ್ರೇರಣೆಯಂತೆ...!!!???
No Ads
Log in to write reviews