ನನಗೆ ಕುಮಾರಸ್ವಾಮಿ ಅವರ ವಿಚಾರ ಮಾತನಾಡಲು ಇಷ್ಟವಿಲ್ಲ. ಆದರೂ ಅವರಿಗೆ ಒಂದು ವಿಚಾರ ಕೇಳ ಬಯಸುತ್ತೇನೆ. ನೀವು ಈ ಜಿಲ್ಲೆಯ ಕ್ಷೇತ್ರವೊಂದರ ಶಾಸಕರು. ಕೋವಿಡ್ ಬಂದಾಗ ಈ ಭಾಗದ ಬಡವರ ರಕ್ಷಣೆಗೆ ನೀವು ಯಾರಾದರೂ ಒಬ್ಬರು ಮುಂದೆ ಬಂದರಾ? ಆದರೆ, ಡಿ.ಕೆ ಸುರೇಶ್ ಅವರು ಪ್ರತಿ ಕುಟುಂಬಕ್ಕೆ ಆಹಾರ ಪದಾರ್ಥ, ಮೆಡಿಕಲ್ ಕಿಟ್ ವಿತರಿಸಿದರು. ರೈತರಿಗೆ ಮಾರುಕಟ್ಟೆ ಇಲ್ಲದಾಗ, ರೈತರು ಬೆಳೆದ ತರಕಾರಿಗಳನ್ನು ಅವರ ಜಮೀನಿನಿಂದ ಖರೀದಿ ಮಾಡಿದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ತರಕಾರಿ ಖರೀದಿಸಿ ಅದನ್ನು ಜನಸಾಮಾನ್ಯರಿಗೆ ಉಚಿತವಾಗಿ ಹಂಚಿದ್ದಾರೆ. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಅನಾಥ ಶವಗಳ ಅಂತ್ಯ ಸಂಸ್ಕಾರ ಮಾಡಿದರು ಎಂದು ವಾಗ್ದಾಳಿ ನಡೆಸುವ ಮೂಲಕ ಡಿಕೆ. ಶಿವಕುಮಾರ್ ತಮ್ಮನ ಪರ ಪ್ರಚಾರ ಆರಂಭಿಸಿದ್ದಾರೆ.
ಸುರೇಶ್ ಹೆಣಗಳ ಸಂಸ್ಕಾರ ಮಾಡಿಸಿದ್ರು :ಡಿಕೆಶಿ
No Ads
Log in to write reviews