No Ads

ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ಆತ್ಮಹತ್ಯೆಗೆ ಶರಣಾದ ದಂಪತಿ

ಜಿಲ್ಲೆ 2025-01-06 13:17:07 249
post

ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಸದಾಶಿವನಗರದ ಆರ್​ಎಂವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ವಾಸವಿದ್ದ ದಂಪತಿ  ಐದು ವರ್ಷದ ವಿಶೇಷ ಚೇತನ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ದಂಪತಿ ವಿಷ ಕುಡಿಸಿ, ಬಳಿಕ ತಾವು ನೇಣಿಗೆ ಶರಣಾಗಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದು ವರ್ಕ್ ಫ್ರಂ ಹೋಮ್ ಮಾಡುತಿದ್ದರು ಎಂದು ತಿಳಿದುಬಂದಿದೆ. ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಕರಣದ ಸಂಬಂಧ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್​ಟಿ ಮಾತನಾಡಿ, ಆರ್​ಎಂವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನ ಮೃತರಾದ ಬಗ್ಗೆ ಮಾಹಿತಿ ಬಂತು‌. ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.

ಸದ್ಯದ ಮಾಹಿತಿ ಪ್ರಕಾರ ಮೃತರು ಮೂಲತಃ ಉತ್ತರಪ್ರದೇಶದ ಅಲಹಾಬಾದ್​ನವರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಮೃತ ಅನೂಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್​​ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಮೃತರ ಕುಟುಂಬಸ್ಥರಿಗೆ ಮಾಹಿತಿಯನ್ನು ತಿಳಿಸಿದ್ದೇವೆ. ಸಂಜೆ ವೇಳೆಗೆ ಮೃತರ ಕುಟುಂಬಸ್ಥರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಎಫ್.ಎಸ್.ಎಲ್ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾಕೆ ಆತ್ಮಹತ್ಯೆಗೆ ಶರಣಾದರು ಎಂಬುವುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದೇವೆ ಎಂದರು.

 

 

No Ads
No Reviews
No Ads

Popular News

No Post Categories
Sidebar Banner
Sidebar Banner