ಪತಿ ಬೇರೆ ಯುವತಿ ಜೊತೆ ಅನೈತಿಕ ಸಂಬಂಧ (illicit relationship) ಇಟ್ಟುಕೊಂಡಿದ್ದಕ್ಕೆ ಮನನೊಂದು ಪತ್ನಿ (Wife) ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನ (Bengaluru) ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಎರಡು ವರ್ಷದಿಂದ ಅಷ್ಟೇ ಮದುವೆಯಾಗಿದ್ದ ಬಾಹರ್ ಅಸ್ಮಾ (29 ) ನೇಣಿಗೆ ಶರಣಾಗಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದೆ ಬಾಹರ್ ಅಸ್ಮಾ, ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆದರೆ ಪತಿ ಬಶೀರ್ ವುಲ್ಲಾ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದಕ್ಕೆ ಬೇಸರಗೊಂಡ ಪತ್ನಿ ಬಾಹರ್ ಅಸ್ಮಾ ಆತ್ಮಹತ್ಯೆಗೆ (Suicide) ಶರಣಾಗಿದ್ದಾಳೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಮೃತ ಬಾಹರ್ ಅಸ್ಮಾ ಅವರ ಕುಟುಂಬಸ್ಥರಿಂದ ನನ್ನ ಮಗಳ ಕೊಲೆಯಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ಮಗಳನ್ನು ಕೊಲೆ ಮಾಡಿ ನೇಣಿಗೆ ಹಾಕಲಾಗಿದೆ ಎಂದು ಪತಿ ಬಶೀರ್ ವುಲ್ಲಾ ವಿರುದ್ಧ ಅಸ್ಮಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಘಟನೆ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಹರ್ ಅಸ್ಮಾ ಸುರ ಸುಂದರಿಯಾಗಿದ್ದಾಳೆ. ಆದ್ರೆ, ಪತಿ ಬಶೀರ್ ವುಲ್ಲಾಗೆ ತನ್ನ ಹೆಂಡತಿ ಎಷ್ಟೇ ಸುಂದರವಾಗಿದ್ದರೂ ಪರ ಯುವತಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದ್ದು, ಸದ್ಯ ಪೊಲೀಸರು, ಪತಿ ಬಶೀರ್ ವುಲ್ಲಾನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.
Log in to write reviews