ಇತ್ತೀಚೆಗೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಹಣಕಾಸಿನ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿತ್ತು. ಇದೀಗ ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಂಡ್ಯದಲ್ಲಿ ನಡೆದಿದೆ.
ಸಾಲಭಾದೆಯಿಂದ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ ಕಂಡಿರುವಂತಹ ಘಟನೆ ಮಂಡ್ಯ ತಾಲೂಕಿನ ಮಂಡ್ಯ ತಾಲೂಕಿನ ವಿಸಿ ನಾಲೆಯಲ್ಲಿ ನಡೆದಿದೆ. ಮೃತರು ಸುಮಾರು 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಸಾಲಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
Log in to write reviews