ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ವೈದ್ಯ ದಂಪತಿ ಅವಳಿ ಮಕ್ಕಳು ರಾಜ್ಯ ಮಟ್ಟದಲ್ಲಿ ಆರನೇ ರ್ಯಾಂಕ್ ಪಡೆದು ಸಹೋದರತೆ ಸಾರಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪಿಯುಸಿ ಫಲಿತಾಂಶ ಹೊರ ಬಂದಿದೆ. ಎಲ್ಲೆಡೆ ರ್ಯಾಂಕ್ಗಳ ಬಗ್ಗೆ ಚರ್ಚೆ ನಡೆದಿದೆ.
ಶಿರಸಿಯ ವೈದ್ಯ ದಂಪತಿಗಳಾದ ಡಾ. ದಿನೇಶ ಹೆಗಡೆ ಹಾಗೂ ಡಾ. ಸುಮನ್ ಹೆಗಡೆ ಅವರ ಅವಳಿ ಮಕ್ಕಳಿಬ್ಬರೂ ಪಿಯುಸಿಯಲ್ಲಿ ರಾಜ್ಯಮಟ್ಟದಲ್ಲಿ ಆರನೇ ರ್ಯಾಂಕ್ ಪಡೆದುಕೊಂಡಿದ್ದಾರೆ. 600ಕ್ಕೆ 594 ಅಂಕ ಪಡೆದು ಶೇ. 99ರಷ್ಟು ಸಾಧನೆ ಮಾಡಿದ್ದಾರೆ.
ದಕ್ಷ ಹಾಗೂ ರಕ್ಷಾ ಇಬ್ಬರೂ ಒಂದೇ ಸಂಖ್ಯೆಯ ಅಂಕ ಪಡೆದಿರೋದು ವಿಶೇಷವಾಗಿದೆ. ಮೂಲತಃ ಶಿರಸಿಯವರಾದರೂ ಈ ಇಬ್ಬರೂ ವಿದ್ಯಾರ್ಥಿಗಳು ಬೆಂಗಳೂರಿನ ದೀಕ್ಷಾ ಕಾಲೇಜಿನಲ್ಲಿ ಓದುತ್ತಿದ್ದರು. ದಕ್ಷನಿಗೆ ನಾಲ್ಕು ವಿಷಯದಲ್ಲಿ ಶೇ.100, ರಕ್ಷಾನಿಗೆ ಎರಡು ವಿಷಯದಲ್ಲಿ ಶೇ 100 ಅಂಕ ಪಡೆದಿದ್ದಾರೆ. ಆದರೂ ಇಬ್ಬರೂ ಒಂದೇ ರೀತಿಯ ಅಂಕ ಗಳಿಸಿದ್ದು ವಿಸ್ಮಯ ಎನ್ನಬಹುದಾಗಿದೆ.
Log in to write reviews