ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು ಇಂದು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ 1 (ಅರ್ಜಂಟ ನಗರ) ಮತ್ತು ಕಮಲಾಪೂರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಮನೆಮನೆಗಳಿಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಮತಪತ್ರ ಹಾಗೂ ಗ್ಯಾರಂಟಿ ಕಾರ್ಡ್ ಗಳೊಂದಿಗೆ ವಾರ್ಡ್ ನ ಪ್ರಮುಖ ಬೀದಿಗಳಲ್ಲಿ ಮತಯಾಚನೆ ಮಾಡಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕ್ರಮಸಂಖ್ಯೆ - 2 ಕ್ಕೆ ಮತ ನೀಡಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಶಿವಲೀಲಾ ಕುಲಕರ್ಣಿ, ಅರವಿಂದ ಏಗನಗೌಡರ ಮತ್ತು ಪಕ್ಷದ ಹಿರಿಯರು, ವಾರ್ಡ್ ನ ಕಾರ್ಯಕರ್ತರು ಮತ್ತು ಯುವಕರು ಉಪಸ್ಥಿತರಿದ್ದರು.
ಅರ್ಜಂಟ ನಗರ, ಕಮಲಾಪೂರದಲ್ಲಿ ವಿನೋದ್ ಅಸೂಟಿ ಮನೆಮನೆಗಳಿಗೆ ತೆರಳಿ ಮತಯಾಚನೆ
No Ads
Log in to write reviews