No Ads

ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ, ಅಧಿಕಾರಿಗಳ ಸಭೆ ಕರೆದ ಸಿದ್ದರಾಮಯ್ಯ

ಕರ್ನಾಟಕ 2024-03-18 13:05:27 77
post

ಬೆಂಗಳೂರಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತೆ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರಲ್ಲಿ ಕುಡಿಯುವ ನೀರಿಗೆ ಉಂಟಾಗಿರುವ ಅಭಾವದ ಕುರಿತಾಗಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಬಿಬಿಎಂಪಿ, ಜಲಮಂಡಳಿ, ಬಿಡಿಎ ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕುಡಿಯುವ ನೀರು ಪೂರೈಕೆಗೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಮಾಹಿತಿ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುವ ಸಭೆಯಲ್ಲಿ ಬೆಂಗಳೂರು ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ, ನೀರಿನ ಮಾಫಿಯಾ ತಡೆಗಟ್ಟುವಿಕೆ, ನೀರಿನ ಸದ್ಬಳಕೆ ಸೇರಿದಂತೆ ಅನೇಕ ವಿಚಾರಗಳ ಕುರಿತು ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಎದುರಾಗಿದ್ದರೂ ಸಹ ಟ್ಯಾಂಕರ್ ಮೂಲಕ ನಗರದ ಅಲ್ಲಲ್ಲಿ ನೀರು ಸರಬರಾಜು ಮಾಡಲಾಗ್ತಿದೆ. ಆದರೆ ನೀರಿನ ಟ್ಯಾಂಕರ್ ಮಾಫಿಯ ತಡೆಯಲು  ಸರ್ಕಾರ ವಿಫಲವಾಯ್ತೇ? ಎನ್ನುವ ಪ್ರಶ್ನೆ ಎದುರಾಗಿದೆ. ನೀರಿನ ಮಾಫಿಯಾ ಮಾಡಬಾರದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದ್ದರೂ ಸಹ ನೀರಿನ ಟ್ಯಾಂಕರ್ ಮಾಲೀಕರು ಡೊಂಟ್ ಕೇರ್ ಎನ್ನುತ್ತಿದ್ದು, ಇದರಿಂದ ಕಾನೂನು ಬಾಹಿರವಾಗಿ ನೀರು ಪೂರೈಕೆ ಮಾಡಲಾಗ್ತಿದೆ ಎಂದು ತಿಳಿದು ಬಂದಿದೆ.

No Ads
No Reviews
No Ads

Popular News

No Post Categories
Sidebar Banner
Sidebar Banner