ಗಾಜಾ: ಗಾಜಾಪಟ್ಟಿಯಲ್ಲಿ ಕಳೆದ ಒಂದು ವಾರದಿಂದ ಇಸ್ರೇಲ್ ಸೇನೆ ನಡೆಸುತ್ತಿರುವ ನಿರಂತರ ಕಾರ್ಯಾಚರಣೆಯಲ್ಲಿ ಆರು ಪ್ಯಾಲೆಸ್ತೀನ್ ಉಗ್ರರು ಹತರಾಗಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ಹತರಾದವರಲ್ಲಿ 2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಮೂವರೂ ಸೇರಿದ್ದಾರೆ.
ದಕ್ಷಿಣ ಗಾಜಾದ ಖಾನ್ ಯೂನಿಸ್ನಲ್ಲಿ ಮಂಗಳವಾರ ನಡೆದ ದಾಳಿಯಲ್ಲಿ ಹಮಾಸ್ ಮತ್ತು ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಸಂಘಟನೆಗಳ ತಲಾ ಒಬ್ಬ ಸದಸ್ಯ ಹತರಾಗಿದ್ದಾರೆ. ಉತ್ತರ ಗಾಜಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಮಾಸ್ನ ನಾಲ್ವರು ಉಗ್ರರು ಸಾವನ್ನಪ್ಪಿದ್ದು, ಇಬ್ಬರು ಸಶಸ್ತ್ರ ಘಟಕಗಳ ಕಮಾಂಡರ್ಗಳಾಗಿದ್ದರು ಎಂದು ಸೇನೆ ಹೇಳಿದೆ.

ಇನ್ನೊಂದೆಡೆ, ಹಮಾಸ್ನ ಆಂತರಿಕ ಭದ್ರತಾ ವಿಭಾಗದ ಮುಖ್ಯಸ್ಥ ನಯೀಮ್ ಅಬು ನಹಾಲ್ ಹತ್ಯೆಯಾಗಿರುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಈ ಬೆಳವಣಿಗೆಯಿಂದ ಹಮಾಸ್ನ ಆಂತರಿಕ ಭದ್ರತಾ ವ್ಯವಸ್ಥೆಗೆ ದೊಡ್ಡ ಹೊಡೆತ ಬಿದ್ದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.
