ಆಶಾ ಕಾರ್ಯಕರ್ತೆಯರ ಧರಣಿ ಬೆಂಬಲಿಸಿ ಸರ್ಕಾರಕ್ಕೆ ವಿಜಯೇಂದ್ರ ತರಾಟೆ!!
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದ್ದು, ಗೌರವಧನ ಹೆಚ್ಚಳದ ಭರವಸೆ ಈಡೇರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮದೇ ಪ್ರಣಾಳಿಕೆಯ ಭರವಸೆ ಮತ್ತು ತಮ್ಮ ಹಿಂದಿನ ಮುಖ್ಯಮಂತ್ರಿಗಳ ಘೋಷಣೆಯನ್ನು ಈಡೇರಿಸುವ ನೈತಿಕ ಜವಾಬ್ದಾರಿಯನ್ನು ಸರ್ಕಾರ ಈಡೇರಿಸಲಿ ಎಂದವರು ಆಗ್ರಹಿಸಿದ್ದಾರೆ.
ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ತಮ್ಮ ಮಕ್ಕಳ ಜೊತೆ ಇಡೀ ರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಬಗ್ಗೆ ಧ್ವನಿ ಎತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಆಶಾ ಕಾರ್ಯಕರ್ತೆಯರ ಅಹವಾಲು ಈ ಕುರುಡು-ಕಿವುಡು ಕಾಂಗ್ರೆಸ್ ಸರ್ಕಾರಕ್ಕೆ ಕಾಣುತ್ತಲೂ ಇಲ್ಲ, ಕೇಳುತ್ತಲೂ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ತೀವ್ರ ಚಳಿ, ಸಮರ್ಪಕ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ತಾಯಂದಿರಿಗೆ, ಸೋದರಿಯರಿಗೆ ಅನುಕೂಲಗಳಿಲ್ಲದ ಪರಿಸ್ಥಿತಿಯಲ್ಲಿ ಹೋರಾಟ ಮುಂದುವರಿಸುತ್ತಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸದೇ ಇರುವುದು ಕಳವಳಕಾರಿಯಾಗಿದೆ. ಹಲವಾರು ಸಂಕಷ್ಟಗಳ ನಡುವೆಯೂ, ಜನರ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸುವ ಆಶಾ ಕಾರ್ಯಕರ್ತೆಯರ ಹಿತರಕ್ಷಣೆ ರಾಜ್ಯ ಸರ್ಕಾರದ ಕರ್ತವ್ಯ. ಆಶಾ ಕಾರ್ಯಕರ್ತೆಯರು ನಮ್ಮ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ತಾಯಿ-ಮಗುವಿನ ಆರೋಗ್ಯ, ಲಸಿಕೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸೇರಿದಂತೆ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅವರ ಸೇವೆ ಅಪಾರ ಎಂಬುದನ್ನು ವಿಜಯೇಂದ್ರ ಸರ್ಕಾರಕ್ಕೆ ನೆನಪಿಸಿದ್ದಾರೆ.
2023ರ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರ ನಿಗದಿತ ಮಾಸಿಕ ಗೌರವಧನವನ್ನು 5,000 ರೂ.ಗಳಿಂದ 8,000 ರೂ.ಗಳಿಗೆ ಹೆಚ್ಚಿಸುವ ಭರವಸೆಯನ್ನು ನೀಡಿದ್ದ ಕಾಂಗ್ರೆಸ್, ಮೊದಲು ನುಡಿದಂತೆ ನಡೆಯಲಿ. ಅಲ್ಲದೆ, ಕಳೆದ ವರ್ಷ, ಅಂದರೆ 2025ರ ಜನವರಿಯಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರೇ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10,000 ರೂ. ನಿಗದಿತ ಗೌರವಧನ ನೀಡುವುದಾಗಿ, ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಘೋಷಿಸಿದ್ದರು. ಈಗ ಇದೇ ಕಾಂಗ್ರೆಸ್ ಪಕ್ಷದ ಸಚಿವರಾದ ಯು.ಟಿ.ಖಾದರ್ ಅವರು, ಕೇಂದ್ರ ಸರ್ಕಾರ 2,000 ರೂ. ನೀಡುತ್ತಿದೆ ಎಂದು ವಾಸ್ತವಕ್ಕೆ ವಿರುದ್ಧವಾದ ಹೇಳಿಕೆ ನೀಡಿರುವುದು ಸರಿಯಲ್ಲ. ಕೇಂದ್ರ ಸರ್ಕಾರ 2025ರ ಮಾರ್ಚ್‌ನಲ್ಲಿಯೇ ನಿಗದಿತ ಮಾಸಿಕ ಪ್ರೋತ್ಸಾಹ ಧನವನ್ನು 2,000 ರೂ.ಗಳಿಂದ 3,500 ರೂ.ಗಳಿಗೆ ಹೆಚ್ಚಿಸಿದೆ ಎಂದು ತಿರುಗೇಟು ನೀಡಿದ್ದಾರೆ.
ಮೊದಲು ಈ ಕಾಂಗ್ರೆಸ್ ಸರ್ಕಾರ, ತಮ್ಮದೇ ಪ್ರಣಾಳಿಕೆಯ ಭರವಸೆ ಮತ್ತು ತಮ್ಮ ಹಿಂದಿನ ಮುಖ್ಯಮಂತ್ರಿಗಳ ಘೋಷಣೆಯನ್ನು ಈಡೇರಿಸುವ ನೈತಿಕ ಜವಾಬ್ದಾರಿಯನ್ನು ಈಡೇರಿಸಲಿ. ಮೊದಲು ತನ್ನ ಪಾಲಿನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ, ನಂತರ ಕೇಂದ್ರ ಸರ್ಕಾರದ ನೆರವು ಹೆಚ್ಚಳದ ಬಗ್ಗೆ ಚರ್ಚಿಸಲಿ. ಈ ವಿಷಯದಲ್ಲಿ ರಾಜಕೀಯ ಮಾಡದೆ, ಕೂಡಲೇ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಬೇಕು, ಅವರಿಗೆ ಆರ್ಥಿಕ ಭದ್ರತೆ ಮತ್ತು ಗೌರವಯುತ ಬದುಕು ಕಲ್ಪಿಸಲು ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.
ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಆಕ್ರೋಶ ಹೆಚ್ಚಾಗಿದ್ದು, ಪ್ರತಿಭಟನೆ ರಾಜಕೀಯ ಚರ್ಚೆಗೂ ಕಾರಣವಾಗಿದೆ.
ನವೆಂಬರ್ 17ರಿಂದ ಆರಂಭವಾಗಿರುವ ಈ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದಾರೆ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ತಮ್ಮ ಪುಟ್ಟ ಮಕ್ಕಳೊಂದಿಗೆ ಹೋರಾಟ ನಡೆಸುತ್ತಿದ್ದಾರೆ
ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು?
– ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ ನೀಡಬೇಕು.
– ನಿವೃತ್ತಿ ಸಂದರ್ಭದಲ್ಲಿ ₹5 ಲಕ್ಷ ಇಡುಗಂಟು ನೀಡಬೇಕು.
– ನಿವೃತ್ತ ಕಾರ್ಯಕರ್ತೆಯರ ಬಾಕಿ ಹಣ ಬಿಡುಗಡೆ ಮಾಡಬೇಕು.
– ಸಮಸ್ತ ಆ್ಯಪ್ ಮೂಲಕ ಕಡ್ಡಾಯವಾಗಿ ಮಾಡಿಸುತ್ತಿರುವ ಮೊಬೈಲ್ ಕೆಲಸವನ್ನು ಕೈಬಿಡಬೇಕು.
– ಆರು ತಿಂಗಳ ಗೌರವಧನ ಸಹಿತ ಹೆರಿಗೆ ರಜೆ ನೀಡಬೇಕು.
– ಬಾಕಿ ಉಳಿದಿರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು.
– ಗಂಭೀರ ಅನಾರೋಗ್ಯಕ್ಕೆ ತುತ್ತಾದವರಿಗೆ ಮೂರು ತಿಂಗಳ ಗೌರವಧನ ನೀಡಬೇಕು.
– ಆರೋಗ್ಯ ಇಲಾಖೆಗೆ ಸಂಬಂಧಿಸದ ಹೆಚ್ಚುವರಿ ಕೆಲಸಗಳನ್ನು ವಹಿಸಬಾರದು.
– ಸುಗಮಕಾರರನ್ನು ಮರುನೇಮಕ ಮಾಡಿ ಬಾಕಿ ವೇತನ ಪಾವತಿಸಬೇಕು
ಪ್ರತಿಭಟನೆ ವೇಳೆ ಇಬ್ಬರು ಅಸ್ವಸ್ಥ!
ನಿರಂತರ ಧರಣಿ, ಚಳಿ ಹಾಗೂ ನಿದ್ರೆಯ ಕೊರತೆಯಿಂದ ಇಬ್ಬರು ಆಶಾ ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ, ಪ್ರತಿಭಟನೆಯಲ್ಲಿ ಭಾಗವಹಿಸಿರುವ ಮಹಿಳೆಯರ ಮಕ್ಕಳಿಗೂ ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ
ಮಹಿಳಾ ಆಯೋಗದ ಅಧ್ಯಕ್ಷೆ ಎದುರು ಕಣ್ಣೀರು
ಪ್ರತಿಭಟನಾ ಸ್ಥಳಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿದ್ದಾರೆ. ಈ ವೇಳೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡು ಕಣ್ಣೀರಿಟ್ಟಿದ್ದಾರೆ.